BREAKING: ಉದ್ಯಮಿ ರತನ್ ಟಾಟಾ ಇನ್ನಿಲ್ಲ - ಅಗಲಿದ "ಸರಳತೆಯ ಸಾಹುಕಾರ"

ಮುಂಬೈ: ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಉದ್ಯಮಿ, ಟಾಟಾ ಸನ್ಸ್ ಚೇರ್ಮನ್ ರತನ್ ಟಾಟಾ ನಿಧನರಾಗಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಅವರನ್ನು ಮುಂಬೈನ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಜನರಲ್ ಚೆಕಪ್‌ಗಾಗಿ ಆಸ್ಪತ್ರೆಗೆ ತೆರಳುತ್ತಿದ್ದೇನೆ ಎಂದು ಸಾಮಾಜಿಕ ಮಾಧ್ಯಮದ ಮೂಲಕ ಹೇಳಿಕೊಂಡಿದ್ದ ಅವರು ನಂತರ ಆಸ್ಪತ್ರೆಗೆ ದಾಖಲಾಗಿದ್ದರು. ಆರೋಗ್ಯ ಸ್ಥಿತಿ ಚಿಂತಾಜನಕವಾದ ಹಿನ್ನೆಲೆ ಅವರನ್ನು ತೀವ್ರ ನಿಗಾ ಘಟಕದಲ್ಲಿ ಇರಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಿಸದೇ 86 ವರ್ಷದ ಹಿರಿಯ ಉದ್ಯಮಿ ರತನ್ ಟಾಟಾ ನಿಧನರಾಗಿದ್ದಾರೆ.
ಟಾಟಾ ಗ್ರೂಪ್ ಅನ್ನು ದೊಡ್ಡ ಮಟ್ಟದಲ್ಲಿ ಬೆಳೆಸಿದ ಕೀರ್ತಿ ಇವರಿಗಿದೆ. ಟಾಟಾ ಸನ್ಸ್, ಟಾಟಾ ಇಂಡಸ್ಟ್ರೀಸ್, ಟಾಟಾ ಮೋಟಾರ್ಸ್, ಟಾಟಾ ಸ್ಟೀಲ್ ಮತ್ತು ಟಾಟಾ ಕೆಮಿಕಲ್ಸ್ ಕೂಡ ಇದೆ.