ಉಡುಪಿ : ಎರ್ನಾಕುಲಂ - ನಿಜಾಮುದ್ದೀನ್ ಎಕ್ಸ್ ಪ್ರೆಸ್ ರೈಲು ಕುಂದಾಪುರದಲ್ಲಿ ನಿಲುಗಡೆ - ಸಂಸದ ಕೋಟ

ಉಡುಪಿ : ದೇಶದ ರಾಜಧಾನಿ ದೆಹಲಿಗೆ ಹಗಲು ವೇಳೆಯಲ್ಲಿ ಸಂಚರಿಸುವ ಪ್ರಯಾಣಿಕರಿಗಾಗಿ ಮತ್ತು ಕೊಲ್ಲೂರು ಮೂಕಾಂಬಿಕಾ ದೇಗುಲಕ್ಕೆ ಬರುವ ಭಕ್ತಾದಿಗಳ ಅನುಕೂಲಕ್ಕಾಗಿ ದೆಹಲಿಗೆ ತೆರಳುವ ಎರಡು ರೈಲುಗಳಿಗೆ ಕುಂದಾಪುರದಲ್ಲಿ ನಿಲುಗಡೆ ಬೇಕು ಎನ್ನುವುದು ಸಾರ್ವಜನಿಕರ ಮತ್ತು ಕುಂದಾಪುರ ರೈಲು ಪ್ರಯಾಣಿಕರ ಹಿತರಕ್ಷಣಾ ಸಮಿತಿಯ ಹಲವು ವರ್ಷಗಳ ಬೇಡಿಕೆಯಾಗಿತ್ತು.
ಈ ಹಿನ್ನೆಲೆಯಲ್ಲಿ ಸಂಸದ ಕೋಟ ಅವರು ಸಚಿವರಾದ ಅಶ್ವಿನಿ ವೈಷ್ಣವ್ ಹಾಗೂ ಕೇಂದ್ರ ರೈಲ್ವೆ ರಾಜ್ಯ ಸಚಿವರಾದ ವಿ.ಸೋಮಣ್ಣರನ್ನು ಭೇಟಿಯಾಗಿ ಮನವಿ ಸಲ್ಲಿಸಿದ್ದರು. ಸಂಸದರ ಮನವಿಯನ್ನು ಪರಿಗಣಿಸಿದ ಸಚಿವರು, ಎರ್ನಾಕುಲಂ ನಿಜಾಮುದ್ದೀನ್ ಎಕ್ಸ್ ಪ್ರೆಸ್ ಹಾಗೂ ತಿರುವನಂತಪುರಂ ನಿಜಾಮುದ್ದೀನ್ ಎಕ್ಸ್‌ಪ್ರೆಸ್ ರೈಲುಗಳನ್ನು ಕುಂದಾಪುರದಲ್ಲಿ ನಿಲುಗಡೆಗೆ ಒಪ್ಪಿಗೆ ಸೂಚಿಸಿ ಆದೇಶ ನೀಡಿದ್ದಾರೆ.
ಇದಕ್ಕಾಗಿ ಸಾರ್ವಜನಿಕರ ಪರವಾಗಿ ಕೇಂದ್ರ ಸರಕಾರಕ್ಕೆ , ಸಚಿವರುಗಳಿಗೆ ಮತ್ತು ಭಾರತೀಯ ರೈಲ್ವೆಗೆ ಧನ್ಯವಾದಗಳನ್ನು ಸಮರ್ಪಿಸುತ್ತೇನೆ ಎಂದು ಉಡುಪಿ-ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ್ ಪೂಜಾರಿ ತಿಳಿಸಿದ್ದಾರೆ.