ಬೆಂಗಳೂರು : ರಾಜ್ಯ ಕಾಂಗ್ರೆಸ್ ಉಸ್ತುವಾರಿ ಸುರ್ಜೇವಾಲಾ ನೇತೃತ್ವದಲ್ಲಿ ಲೋಕಸಭೆ ಚುನಾವಣೆ ಅಭ್ಯರ್ಥಿಗಳ ಪಟ್ಟಿ ಪರಿಷ್ಕರಣೆ

ಬೆಂಗಳೂರು : ಲೋಕಸಭೆ ಚುನಾವಣೆ ಘೋಷಣೆ ಹತ್ತಿರವಾಗುತ್ತಿದ್ದಂತೆ ಕಾಂಗ್ರೆಸ್, ಬಿಜೆಪಿ, ಜೆಡಿಎಸ್ ಸೇರಿದಂತೆ ಮೂರೂ ರಾಜಕೀಯ ಪಕ್ಷಗಳಲ್ಲಿ ಚಟುವಟಿಕೆಗಳು ಜೋರಾಗಿದ್ದು, ಇಂದು ಕೆಪಿಸಿಸಿ ಕಚೇರಿಯಲ್ಲಿ ಕಾಂಗ್ರೆಸ್ ಚುನಾವಣೆ ಸಮಿತಿ ಸಭೆ ನಡೆಯಿತು.
ಎಐಸಿಸಿ ಪ್ರಧಾನ ಕಾರ್ಯದರ್ಶಿ ಮತ್ತು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲ ನೇತೃತ್ವದ ಸಭೆ ನಡೆಸಲಾಯಿತು. ಕಾಂಗ್ರೆಸ್ ಚುನಾವಣಾ ಸಮಿತಿ ಸಭೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಸಿಎಂ ಸಿದ್ದರಾಮಯ್ಯ, ಲೋಕಸಭೆ ಅಭ್ಯರ್ಥಿಗಳ ಪಟ್ಟಿ ಪರಿಷ್ಕರಣೆ ಸಮಿತಿ ಅಧ್ಯಕ್ಷ ಹರೀಶ್ ಚೌಧರಿ, ಎಐಸಿಸಿ ಕಾರ್ಯದರ್ಶಿಗಳಾದ ರೋಜಿ ಜಾನ್, ಅಭಿಷೇಕ್ ದತ್, ಮಯೂರ ಜೈಕುಮಾರ್, ಪರಿಷ್ಕರಣೆ ಸಮಿತಿ ಸದಸ್ಯರಾದ ಜಿಗ್ನೇಶ್ ಮೇವಾನಿ, ಡಾ. ವಿಶ್ವಜಿತ್ ಕದಂ ಭಾಗವಹಿಸಿದ್ದರು.