SSLC ಪರೀಕ್ಷೆಗೆ ಸಮವಸ್ತ್ರ ಕಡ್ಡಾಯ : ಹಿಜಾಬ್ ಧಾರಿಗಳಿಗೆ ನೋ ಎಂಟ್ರಿ.. ಶಿಕ್ಷಣ ಇಲಾಖೆ ಸೂಚನೆ

ಬೆಂಗಳೂರು: ಹಿಜಾಬ್ ವಿಚಾರಕ್ಕೆ ಸಂಬಂಧಪಟ್ಟಂತೆ ಹೈಕೋರ್ಟ್ ತೀರ್ಪಿನ ನಂತರವರು ಕೆಲವು ವಿದ್ಯಾರ್ಥಿಗಳು ಹಿಜಾಬ್ ಗಾಗಿ ಪಟ್ಟು ಹಿಡಿದ್ದಿದ್ದಾರೆ. ಇದರ ಮಧ್ಯೆ ಮಾರ್ಚ್ 28 ರಿಂದ ಎಸ್ ಎಸ್ ಎಲ್ ಸಿ ಮುಖ್ಯ ಪರೀಕ್ಷೆ ಶುರುವಾಗಲಿದ್ದು ಪರೀಕ್ಷೆಗೆ ಸಮವಸ್ತ್ರ ಕಡ್ಡಾಯವೆಂದು ರಾಜ್ಯ ಸರ್ಕಾರ ಸುತ್ತೋಲೆ ಹೊರಡಿಸಿದೆ. ಈ ಬಾರಿಯ ಎಸ್ಎಸ್ಎಲ್ ಸಿ ಪರೀಕ್ಷೆಯು ಮಾರ್ಚ್ 28 ರಿಂದ ಎಪ್ರಿಲ್ 11ರವರೆಗೆ ನಡೆಯಲಿದೆ. ರಾಜ್ಯದ ಎಲ್ಲಾ ಸರ್ಕಾರಿ ಶಾಲೆಗಳಲ್ಲಿ ಸರ್ಕಾರ ನಿಗದಿಪಡಿಸಿರುವ ಶಾಲಾ ಸಮವಸ್ತ್ರವನ್ನು ವಿದ್ಯಾರ್ಥಿಗಳು ಕಡ್ಡಾಯವಾಗಿ ಧರಿಸಬೇಕು. ಖಾಸಗಿ ಶಾಲೆಗಳಲ್ಲಿ ಆಯಾ ಆಡಳಿತ ಮಂಡಳಿ ನಿರ್ಧರಿಸುವ ಸಮವಸ್ತ್ರವನ್ನು ವಿದ್ಯಾರ್ಥಿಗಳು ಧರಿಸತಕ್ಕದ್ದು ಎಂದು ಆದೇಶಿಸಲಾಗಿದೆ.