ಬೆಂಗಳೂರು : ಬೆಂಗಳೂರಿಗೆ ಆಗಮಿಸಿದ ಕೇಂದ್ರ ಗೃಹ ಸಚಿವ ಅಮಿತ್ ಶಾ

ಬೆಂಗಳೂರು : ಬೆಂಗಳೂರಿಗೆ ಆಗಮಿಸಿದ ಕೇಂದ್ರ ಗೃಹ ಸಚಿವ ಅಮಿತ್ ಶಾ

ಬೆಂಗಳೂರು : ನಾಳೆ ಬೆಂಗಳೂರಿನಲ್ಲಿ ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿಯಾಗಲು ಕೇಂದ್ರ ಗೃಹ ಸಚಿವ ಅಮಿತ್ ಶಾ ಬೆಂಗಳೂರಿಗೆ ಆಗಮಿಸಿದ್ದಾರೆ. 

ಹೆಚ್ ಎ ಎಲ್ ವಿಮಾನ ನಿಲ್ದಾಣದಲ್ಲಿ ಅಮಿತ್ ಶಾ ಅವರನ್ನ ಸ್ವಾಗತ ಮಾಡಿದ ಕೇಂದ್ರ ಸಂಸದೀಯ ಮಂಡಳಿಯ ಸಸ್ಯರಾದ ಬಿಎಸ್ ಯಡಿಯೂರಪ್ಪನವರು, ಬಿಜೆಪಿ ರಾಜ್ಯಾಧ್ಯಕ್ಷರಾದ ಬಿ. ವೈ. ವಿಜಯೇಂದ್ರ ವಿಧಾನಸಭೆಯ ವಿಪಕ್ಷ ನಾಯಕರಾದ ಆರ್ ಅಶೋಕ್, ವಿಧಾನ ಪರಿಷತ್ತಿನ ಸದಸ್ಯರ ಸಿಟಿ ರವಿ, ಸಂಸದರಾದ ಪಿ . ಸಿ ಮೋಹನ್, ಡಾಕ್ಟರ್ ಮಂಜುನಾಥ್, ವಿಧಾನ ಪರಿಷತ್ತಿನ ಮುಖ್ಯ ಸಚೇತಕರಾದ ಎನ್ ರವಿಕುಮಾರ್, ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ನಂದೀಶ್ ರೆಡ್ಡಿ, ಶಾಸಕರಾದ ಶೈಲೇಂದ್ರ ಬೆಲ್ದಾಳೆ, ಪ್ರಭು ಚೌಹಾಣ್ ಉಪಸ್ಥಿತಿರಿದ್ದರು. 

ನಾಳೆ ಬೆಂಗಳೂರು ಉತ್ತರ ತಾಲ್ಲೂಕಿನಲ್ಲಿರುವ ಬಿಜಿಎಸ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆ ಉದ್ಘಾಟನಾ ಕಾರ್ಯಕ್ರಮದಲ್ಲಿ ಅಮಿತ್ ಶಾ ಪಾಲ್ಗೊಳ್ಳಲಿದ್ದಾರೆ.