ಹುಬ್ಬಳ್ಳಿ-ಪುಣೆ ನಡುವೆ ವಂದೇ ಭಾರತ್ : 15ಕ್ಕೆ ಪ್ರಧಾನಮಂತ್ರಿ ಚಾಲನೆ..!

ಹುಬ್ಬಳ್ಳಿ-ಪುಣೆ ನಡುವೆ ವಂದೇ ಭಾರತ್ : 15ಕ್ಕೆ ಪ್ರಧಾನಮಂತ್ರಿ ಚಾಲನೆ..!

ಹುಬ್ಬಳ್ಳಿ : ಬಹು ನಿರೀಕ್ಷಿತ ಹುಬ್ಬಳ್ಳಿ-ಪುಣೆ ನಡುವೆ "ವಂದೇ ಭಾರತ್‌' ರೈಲು ಸಂಚಾರಕ್ಕೆ ಎಲ್ಲ ಸಿದ್ಧತೆ ಪೂರ್ಣಗೊಂಡಿದೆ. ಸೆಪ್ಟೆಂಬರ್ 15ರಂದು ಪ್ರಧಾನಿ ನರೇಂದ್ರ ಮೋದಿ ಅವರು ವಿದ್ಯುಕ್ತವಾಗಿ ಚಾಲನೆ ನೀಡಲಿದ್ದಾರೆ. 

ಸೆಪ್ಟೆಂಬರ್ 13 ಅಥವಾ 14ರಂದು ಪ್ರಾಯೋಗಿಕ ಸಂಚಾರ ನಡೆಯಲಿದೆ. ರೈಲು 558 ಕಿ.ಮೀ ದೂರವನ್ನು 9 ಗಂಟೆ 15 ನಿಮಿಷಗಳಲ್ಲಿ ಕ್ರಮಿಸಲಿದೆ. ಬೆಳಿಗ್ಗೆ 5ಕ್ಕೆ ಹುಬ್ಬಳ್ಳಿಯಿಂದ ಹೊರಟು, ಮಧ್ಯಾಹ್ನ 2.10ಕ್ಕೆ ಪುಣೆ ತಲುಪಲಿದೆ. ಅದೇ ರೀತಿ ಮಧ್ಯಾಹ್ನ 2.40ಕ್ಕೆ ಅಲ್ಲಿಂದ ಹೊರಡುವ ರೈಲು ರಾತ್ರಿ 11.50ಕ್ಕೆ ಹುಬ್ಬಳ್ಳಿಗೆ ಬರಲಿದೆ. 

18 ಬೋಗಿಗಳನ್ನು ಹೊಂದಿರುವ ರೈಲು, ಧಾರವಾಡ, ಬೆಳಗಾವಿ, ಮೀರಜ್‌ ನಿಲ್ದಾಣಗಳಲ್ಲಿ ನಿಲುಗಡೆ ಇರಲಿದೆ. ಸೋಮವಾರ ಹೊರತುಪಡಿಸಿ ಎಲ್ಲ ದಿನಗಳಲ್ಲೂ ರೈಲು ಸಂಚರಿಸಲಿದೆ. ರೈಲು ಗಂಟೆಗೆ 60 ಕಿ.ಮೀ ವೇಗದಲ್ಲಿ ಸಾಗಲಿದೆ. 

ವೇಳಾಪಟ್ಟಿಯನ್ನು ಈಗಾಗಲೇ ರೈಲ್ವೆ ಮಂಡಳಿಗೆ ಕಳಿಸಲಾಗಿದೆ. ಪುಣೆಯಿಂದ ಹುಬ್ಬಳ್ಳಿಗೆ ಬರುವಾಗ ರೈಲು ವಾರದಲ್ಲಿ ಒಂದು ದಿನ ಕೊಲ್ಲಾಪುರಕ್ಕೆ ಹೋಗಲಿದೆ. ಯಾವ ದಿನ ಎಂಬುದನ್ನು ರೈಲ್ವೆ ಮಂಡಳಿ ನಿರ್ಧರಿಸಲಿದೆ.