ಚುನಾವಣಾ ರಾಜಕೀಯದಿಂದ ವೀರಪ್ಪ ಮೊಯಿಲಿ ನಿವೃತ್ತಿ ಘೋಷಣೆ

ಚಿಕ್ಕಬಳ್ಳಾಪುರ: ಮಾಜಿ ಮುಖ್ಯಮಂತ್ರಿ ಮಾಜಿ ಸಂಸದ ಹಾಗೂ ಕಾಂಗ್ರೆಸ್ ಪಕ್ಷದ ಮುತ್ಸದ್ಧಿ ನಾಯಕ ವೀರಪ್ಪ ಮೊಯಿಲಿ ಅವರು ಚುನಾವಣಾ ರಾಜಕಾರಣದಿಂದ ನಿವೃತ್ತಿ ಘೋಷಿಸಿದ್ದಾರೆ. ಈ ಬಾರಿ ಲೋಕಸಭೆ ಸ್ಪರ್ಧಿಸಲು ತಮ್ಮ ಪಕ್ಷದಿಂದ ಅವರಿಗೆ ಟಿಕೆಟ್ ಸಿಗದ ಹಿನ್ನೆಲೆ ಬೇಸರಗೊಂಡು ಮೊಯಿಲಿ ಈ ನಿರ್ಧಾರಕ್ಕೆ ಬಂದಿದ್ದಾರೆ ಎನ್ನಲಾಗಿದೆ.
ಈ ಕುರಿತಂತೆ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಚುನಾವಣಾ ರಾಜಕೀಯದಿಂದ ನಿವೃತ್ತಿ ಪಡೆಯುತ್ತಿದ್ದೇನೆ. ಚಿಕ್ಕಬಳ್ಳಾಪುರದ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ರಕ್ಷಾ ರಾಮಯ್ಯ ಅವರಿಗೆ ಬೆಂಬಲ ನೀಡುವುದಾಗಿ ಘೋಷಿಸಿದರು.
ಕೇವಲ ರಾಜಕಾರಣಿಯಾಗದ ವೀರಪ್ಪ ಮೊಯ್ಲಿ ಅವರು, ಸಾಹಿತಿ ಕೂಡ ಆಗಿದ್ದಾರೆ. ಅವರ ಹೆಂಡತಿ ಮಾಲತಿ ಮೊಯ್ಲಿ ಸಹ ಲೇಖಕಿಯಾಗಿದ್ದಾರೆ.