Breaking: ಉಪ ರಾಷ್ಟ್ರಪತಿ ಚುನಾವಣೆ 2025 - ಎನ್‌ಡಿಎ ಅಭ್ಯರ್ಥಿ ರಾಧಾಕೃಷ್ಣನ್‌ಗೆ ಗೆಲುವು

ನವದೆಹಲಿ: ಉಪ ರಾಷ್ಟ್ರಪತಿ ಚುನಾವಣೆಯಲ್ಲಿ ಎನ್‌ಡಿಎ ಅಭ್ಯರ್ಥಿ ಸಿ.ಪಿ. ರಾಧಾಕೃಷ್ಣನ್ ಅವರು ಭರ್ಜರಿ ಗೆಲುವು ಸಾಧಿಸಿದ್ದಾರೆ.
ಜುಲೈ 21ರಂದು ಜಗದೀಪ್ ಧನಕರ್ ಅವರ ದಿಢೀರ್ ರಾಜೀನಾಮೆಯಿಂದ ತೆರವಾಗಿದ್ದ ಉಪರಾಷ್ಟ್ರಪತಿ ಹುದ್ದೆಗೆ ಇಂದು (ಮಂಗಳವಾರ) ಚುನಾವಣೆ ನಡೆಯಿತು. ಎನ್‌ಡಿಎ ಮೈತ್ರಿಕೂಟದಿಂದ ಉಪರಾಷ್ಟ್ರಪತಿ ಚುನಾವಣೆಯ ಅಭ್ಯರ್ಥಿಯಾಗಿ ಸಿ.ಪಿ. ರಾಧಾಕೃಷ್ಣನ್ ಹಾಗೂ ವಿರೋಧ ಪಕ್ಷಗಳ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ನ್ಯಾ. ಸುದರ್ಶನ ರೆಡ್ಡಿ ಕಣಕ್ಕಿಳಿದಿದ್ದರು.