ಅಣ್ಣಿಗೇರಿ: ವಿಕಸಿತ ಭಾರತ ಸಂಕಲ್ಪ ಯಾತ್ರೆ

ಅಣ್ಣಿಗೇರಿ: ಪ್ರಧಾನಮಂತ್ರಿ ನರೇಂದ್ರ ಮೋದಿಯವರ ನೇತೃತ್ವದಲ್ಲಿ ನಡೆಯುತ್ತಿರುವ ವಿಕಸಿತ ಭಾರತ ಸಂಕಲ್ಪ ಯಾತ್ರೆಯ ಅಂಗವಾಗಿ ನವಲಗುಂದ ವಿಧಾನಸಭಾ ಕ್ಷೇತ್ರದ ಶಿರೂರ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ಫಲಾನುಭವಿಗಳ ಕಾರ್ಯಕ್ರಮದ ಉದ್ಘಾಟನೆಯನ್ನು ಕೇಂದ್ರ ಸಚಿವರಾದ ಪ್ರಲ್ಹಾದ ಜೋಶಿಯವರು ಸಸಿಗೆ ನೀರುಣಿಸುವ ಮೂಲಕ ಚಾಲನೆ ನೀಡಿದರು.
ನವಲಗುಂದ ವಿಧಾನಸಭಾ ಕ್ಷೇತ್ರದಲ್ಲಿ ಬರುವ 37 ಗ್ರಾಮ ಪಂಚಾಯಿತಿಗಳಿಗೆ ವಿಕಸಿತ ಭಾರತ ಸಂಕಲ್ಪ ಯಾತ್ರೆಯು ಸಂಚರಿಸಿ ಮೋದಿ ಗ್ಯಾರಂಟಿಯಲ್ಲಿ ಬರುವ 17 ಯೋಜನೆಗಳನ್ನು ವೀಡಿಯೋ ಮುಖಾಂತರ ತಿಳಿಸಿ ಹೊಸ ಫಲಾನುಭವಿಗಳ ಆಯ್ಕೆ ಮಾಡುವರು.
ಕಾರ್ಯಕ್ರಮದ ವಿಶೇಷವೆಂದರೆ ರೈತ ಗೀತೆಯೊಂದಿಗೆ ಕಾರ್ಯಕ್ರಮವನ್ನು ಪ್ರಾರಂಭಿಸಿ ಪ್ರತಿಜ್ಞಾವಿಧಿ ಸ್ವೀಕರಿಸಿ, ರಾಷ್ಟ್ರಗೀತೆ ಹಾಡುವ ಮುಖಾಂತರ ಮುಕ್ತಾಯಗೊಳಿಸಲಾಯಿತು.