ಬೆಂಗಳೂರು : ಗ್ರಾಮ ಆಡಳಿತ ಅಧಿಕಾರಿ ಪರೀಕ್ಷೆ ಫಲಿತಾಂಶ ಪ್ರಕಟ

ಬೆಂಗಳೂರು : ಗ್ರಾಮ ಆಡಳಿತ ಅಧಿಕಾರಿ ಪರೀಕ್ಷೆ ಫಲಿತಾಂಶ ಪ್ರಕಟ

ಬೆಂಗಳೂರು : ಗ್ರಾಮ ಆಡಳಿತ ಅಧಿಕಾರಿ ಹುದ್ದೆಗೆ ಅಕ್ಟೋಬರ್ 27ರಂದು ನಡೆಸಲಾದ ಲಿಖಿತ ಪರೀಕ್ಷೆಯಲ್ಲಿ ಅಭ್ಯರ್ಥಿಗಳು ಪಡೆದಿರುವ ಅಂಕಗಳ ತಾತ್ಕಾಲಿಕ ಪಟ್ಟಿಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಬುಧವಾರ ಪ್ರಕಟಿಸಿದೆ. 

ಇದರ ಜತೆಗೆ ಅಂತಿಮ ಕೀ ಉತ್ತರಗಳನ್ನೂ ಪ್ರಕಟಿಸಲಾಗಿದೆ. ತಾತ್ಕಾಲಿಕ ಅಂಕಪಟ್ಟಿಗೆ ಆಕ್ಷೇಪಣೆಗಳು ಇದ್ದಲ್ಲಿ ನ.28ರಂದು ಸಂಜೆ 4ಗಂಟೆ ಒಳಗೆ ವೆಬ್‌ಸೈಟ್‌ನಲ್ಲಿ ಒದಗಿಸಲಾದ ಲಿಂಕ್ ಮೂಲಕ ಸಲ್ಲಿಸಬಹುದು ಎಂದು ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಎಚ್.ಪ್ರಸನ್ನ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ. 

ದಿನಾಂಕ ವಿಸ್ತರಣೆ: 

ಬಿಎಸ್ ಸಿ ನರ್ಸಿಂಗ್ ಮತ್ತು ಅಲೈಡ್ ಹೆಲ್ತ್ ಸೈನ್ಸ್ ಕೋರ್ಸ್‌ಗಳಿಗೆ ಸೀಟ್ ಹಂಚಿಕೆಯಾಗಿರುವ ಅಭ್ಯರ್ಥಿಗಳು ಶುಲ್ಕ ಪಾವತಿಸಿ, ಪ್ರವೇಶ ಪತ್ರ ಡೌನ್‌ಲೋಡ್ ಮಾಡಿಕೊಳ್ಳಲು ನ.28ರವರೆಗೆ ದಿನಾಂಕ ವಿಸ್ತರಿಸಲಾಗಿದೆ. ನ.29ರೊಳಗೆ ಕಾಲೇಜಿಗೆ ವರದಿ ಮಾಡಿಕೊಳ್ಳಬೇಕು ಎಂದೂ ಅವರು ವಿವರಿಸಿದ್ದಾರೆ.