ಏಕದಿನ ಕ್ರಿಕೆಟ್ ಇತಿಹಾಸದಲ್ಲಿ ವೇಗವಾಗಿ 13,000 ರನ್ ಗಳಿಸಿದ ವಿರಾಟ್ ಕೊಹ್ಲಿ

ಏಕದಿನ ಕ್ರಿಕೆಟ್ ಇತಿಹಾಸದಲ್ಲಿ ವೇಗವಾಗಿ 13,000 ರನ್ ಗಳಿಸಿದ ವಿರಾಟ್ ಕೊಹ್ಲಿ

ಟೀಂ ಇಂಡಿಯಾದ ಮಾಜಿ ನಾಯಕ ವಿರಾಟ್ ಕೊಹ್ಲಿ ಏಕದಿನ ಕ್ರಿಕೆಟ್ ಇತಿಹಾಸದಲ್ಲಿ ಅತ್ಯಂತ ವೇಗವಾಗಿ 13,000 ರನ್ ಗಳಿಸಿದ ಕ್ರಿಕೆಟಿಗ ಎನಿಸಿಕೊಂಡಿದ್ದಾರೆ. 

34 ವರ್ಷದ ವಿರಾಟ್ ಕೊಹ್ಲಿ ಅವರು ಸೋಮವಾರ ಏಷ್ಯಾ ಕಪ್ 2023 ಸೂಪರ್ ಫೋರ್ ಹಂತದ ಪಂದ್ಯದಲ್ಲಿ ಪಾಕಿಸ್ತಾನದ ವಿರುದ್ಧ 122* ರನ್ ಗಳಿಸುವ ಮೂಲಕ ಮೈಲಿಗಲ್ಲನ್ನು ತಲುಪಿದರು. 13,000 ರನ್ ಗಡಿಯನ್ನು ತಲುಪಲು ಕೊಹ್ಲಿ 267 ಇನ್ನಿಂಗ್ಸ್ ತೆಗೆದುಕೊಂಡಿದ್ದು, ಸಚಿನ್ ತೆಂಡೂಲ್ಕರ್ ಅವರ ದಾಖಲೆಯನ್ನು (321 ಇನ್ನಿಂಗ್ಸ್) ಮುರಿದರು.