ಟಿ20 ಕ್ರಿಕೆಟ್‌ನಲ್ಲಿ ಇತಿಹಾಸ ಬರೆದ ವಿರಾಟ್ ಕೊಹ್ಲಿ

ಟಿ20 ಕ್ರಿಕೆಟ್‌ನಲ್ಲಿ ಇತಿಹಾಸ ಬರೆದ ವಿರಾಟ್ ಕೊಹ್ಲಿ

ಅಡಿಲೇಡ್: ಟೀಂ ಇಂಡಿಯಾದ ಮಾಜಿ ನಾಯಕ ವಿರಾಟ್ ಕೊಹ್ಲಿ ಟಿ20 ಕ್ರಿಕೆಟ್‌ನಲ್ಲಿ ಇತಿಹಾಸ ಬರೆದಿದ್ದಾರೆ. 

ಹೌದು. ಟಿ20 ಕ್ರಿಕೆಟ್‌ ಇತಿಹಾಸದಲ್ಲೇ 4,000 ರನ್ ಗಳಿಸಿದ ಮೊದಲ ಕ್ರಿಕೆಟಿಗ ಎಂಬ ಹೆಗ್ಗಳಿಕೆಗೆ ವಿರಾಟ್ ಕೊಹ್ಲಿ ಪಾತ್ರರಾಗಿದ್ದಾರೆ. ಇಂದು ಅಡಿಲೇಡ್‌ನಲ್ಲಿ ಇಂಗ್ಲೆಂಡ್ ವಿರುದ್ಧದ 2022ರ ಟಿ20 ವಿಶ್ವಕಪ್ ಟೂರ್ನಿಯ ಸೆಮಿಫೈನಲ್‌ನಲ್ಲಿ ಕೊಹ್ಲಿ 40 ಎಸೆತಗಳಲ್ಲಿ 50 ರನ್ ಗಳಿಸುವ ಮೂಲಕ ಈ ಮೈಲಿಗಲ್ಲನ್ನು ತಲುಪಿದರು. ಕೊಹ್ಲಿ ಆಡಿದ ಟಿ20 ಕ್ರಿಕೆಟ್‌ನ 107 ಇನ್ನಿಂಗ್ಸ್‌ಗಳ ಪೈಕಿ 38ರಲ್ಲಿ 50 ಪ್ಲಸ್ ರನ್‌ ದಾಖಲಿಸಿದ್ದಾರೆ.