ವಿಧಾನ ಪರಿಷತ್ ನ 7 ಸ್ಥಾನಗಳಿಗೆ ಜೂನ್ 3 ರಂದು ಮತದಾನ

ವಿಧಾನ ಪರಿಷತ್ ನ 7 ಸ್ಥಾನಗಳಿಗೆ ಜೂನ್ 3 ರಂದು ಮತದಾನ

ಬೆಂಗಳೂರು: ತೆರವಾಗಲಿರುವ ರಾಜ್ಯ ವಿಧಾನ ಪರಿಷತ್ನ ಏಳು ಸ್ಥಾನಗಳಿಗೆ ಜೂನ್ 3ರಂದು ಮತದಾನ ನಡೆಯಲಿದೆ. ಮೇ 17ರಂದು ಅಧಿಸೂಚನೆ ಹೊರಬೀಳಲಿದೆ. ನಾಮಪತ್ರ ಸಲ್ಲಿಕೆಗೆ ಮೇ 24 ಕೊನೆಯ ದಿನವಾಗಿರಲಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ. 

ಲಕ್ಷ್ಮಣ ಸಂಗಪ್ಪ ಸವದಿ, ರಾಮಪ್ಪ ತಿಮ್ಮಾಪುರ್, ಅಲ್ಲಂ ವೀರಭದ್ರಪ್ಪ, ಹೆಚ್.ಎಂ.ರಮೇಶ್ ಗೌಡ, ವೀಣಾ ಅಚ್ಚಯ್ಯ, ನಾರಾಯಣ ಸ್ವಾಮಿ ಕೆ.ವಿ, ಲಹರ್ ಸಿಂಗ್ ಸಿರೋಯಾ ಜೂನ್ 14ರಂದು ವಿಧಾನಪರಿಷತ್ನಿಂದ ನಿವೃತ್ತಿಯಾಗಲಿದ್ದಾರೆ. 

ಅಧಿಸೂಚನೆ ದಿನಾಂಕ ಮೇ 17, ನಾಮಪತ್ರಗಳ ಸಲ್ಲಿಕೆಗೆ ಮೇ 24 ಕೊನೆಯ ದಿನವಾಗಲಿದೆ. ಮೇ 25 ನಾಮಪತ್ರಗಳ ಪರಿಶೀಲನೆ ನಡೆಯಲಿದೆ. ನಾಮಪತ್ರಗಳನ್ನು ಹಿಂಪಡೆಯಲು ಮೇ 27 ಕೊನೆಯ ದಿನವಾಗಿದೆ. ಜೂನ್ 3ರಂದು ಬೆಳಗ್ಗೆ 9 ಗಂಟೆಯಿಂದ ಸಂಜೆ 4ಗಂಟೆಯವರೆಗೆ ಚುನಾವಣೆ ನಡೆಯಲಿದೆ. ಅದೇ ದಿನ ಸಂಜೆ 5 ಗಂಟೆಗೆ ಮತ ಎಣಿಕೆ ನಡೆಯಲಿದೆ.