ಪಂಜಾಬ್ ವಿಧಾನಸಭೆಗೆ ಇಂದು ಮತದಾನ

ನವದೆಹಲಿ: ಪಂಜಾಬ್ ವಿಧಾನಸಭೆಯ 117 ಸ್ಥಾನಗಳಿಗೆ ಮತ್ತು ಉತ್ತರ ಪ್ರದೇಶದ 59 ವಿಧಾನಸಭಾ ಕ್ಷೇತ್ರಗಳಲ್ಲಿ ಮೂರನೇ ಹಂತದ ಮತದಾನ ಇಂದು ನಡೆಯಲಿದೆ. ಪಂಚ ರಾಜ್ಯ ಚುನಾವಣೆ ವಿವಿಧ ಹಂತಗಳಲ್ಲಿ ಆರಂಭವಾಗಿದೆ. ಇನ್ನು 117 ಸದಸ್ಯ ಬಲದ ಪಂಜಾಬ್ ವಿಧಾನಸಭೆಗೆ ಇಂದು (ಭಾನುವಾರ) ಒಂದೇ ಹಂತದಲ್ಲಿ ಮತದಾನ ನಡೆಯಲಿದೆ. 1,304 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಉತ್ತರ ಪ್ರದೇಶ ವಿಧಾನಸಭೆಯ ಮೂರನೇ ಹಂತದ ಮತದಾನ ಭಾನುವಾರ ನಡೆಯಲಿದೆ. 59 ಕ್ಷೇತ್ರಗಳ 627 ಅಭ್ಯರ್ಥಿಗಳು ಸ್ಪರ್ಧೆಯಲ್ಲಿದ್ದಾರೆ. ಪಂಜಾಬ್ ನಲ್ಲಿ ಬೆಳಿಗ್ಗೆ 8ರಿಂದ ಸಂಜೆ 6 ಗಂಟೆವರೆಗೆ ಹಾಗೂ ಉತ್ತರ ಪ್ರದೇಶದಲ್ಲಿ ಬೆಳಿಗ್ಗೆ 7ರಿಂದ ಸಂಜೆ 6 ಗಂಟೆವರೆಗೆ ಮತದಾನ ನಡೆಯಲಿದೆ. ಮಾರ್ಚ್ 10ರಂದು ಮತ ಎಣಿಕೆ ನಡೆಯಲಿದೆ.