ಧಾರವಾಡ ಲೋಕಸಭಾ ಕ್ಷೇತ್ರದಲ್ಲಿ ಶೇ.74.35 ರಷ್ಟು ಮತದಾನ

ಧಾರವಾಡ: ಎಂಟು ವಿಧಾನಸಭಾ ಕ್ಷೇತ್ರಗಳನ್ನೊಳಗೊಂಡ ಧಾರವಾಡ ಲೋಕಸಭಾ ಕ್ಷೇತ್ರದಲ್ಲಿ ಶೇ.74.35 ರಷ್ಟು ಮತದಾನವಾಗಿದೆ. ಲೋಕಸಭಾ ಕ್ಷೇತ್ರದಾದ್ಯಂತ ಬಹುತೇಕ ಶಾಂತಿಯುತವಾಗಿಯೇ ಮತದಾನ ನಡೆದಿದೆ.
2019ರಲ್ಲಿ ಧಾರವಾಡ ಲೋಕಸಭಾ ಕ್ಷೇತ್ರದಲ್ಲಿ ಶೇ.70.12 ರಷ್ಟು ಮತದಾನವಾಗಿತ್ತು. ಈ ಬಾರಿ ಶೇ.74.35 ರಷ್ಟು ದಾಖಲೆಯ ಮತದಾನವಾಗಿದೆ. ಬೆಳಿಗ್ಗೆ 7 ಗಂಟೆಯಿಂದ ಆರಂಭವಾದ ಮತದಾನ ಸಂಜೆ 6 ಗಂಟೆಯವರೆಗೂ ನಡೆಯಿತು. ನವಲಗುಂದ ಹಾಗೂ ಕುಂದಗೋಳ ಮತಕ್ಷೇತ್ರದಲ್ಲಿ ಸಂಜೆ 6 ಗಂಟೆಯೊಳಗೆ ಮತಗಟ್ಟೆಗೆ ಬಂದ ಮತದಾರರಿಗೆ ಚೀಟಿ ನೀಡಿ ಮತದಾನ ಮಾಡಿಸಲಾಯಿತು. ಈ ಎರಡೂ ಕ್ಷೇತ್ರದಲ್ಲಿ ಮತದಾನ ವಿಳಂಬವಾಯಿತು.
ಕಲಘಟಗಿ ಮತಕ್ಷೇತ್ರದಲ್ಲಿ ಶೇ.82.26, ಕುಂದಗೋಳ ಮತಕ್ಷೇತ್ರದಲ್ಲಿ ಶೇ.80, ಶಿಗ್ಗಾಂವ ಮತಕ್ಷೇತ್ರದಲ್ಲಿ ಶೇ.77.24, ನವಲಗುಂದ ಮತಕ್ಷೇತ್ರದಲ್ಲಿ ಶೇ.76.92, ಧಾರವಾಡ ಗ್ರಾಮೀಣ ಮತಕ್ಷೇತ್ರದಲ್ಲಿ ಶೇ.75.83, ಹು-ಧಾ ಪೂರ್ವ ಮತಕ್ಷೇತ್ರದಲ್ಲಿ ಶೇ.73.48, ಹುಬ್ಬಳ್ಳಿ, ಧಾರವಾಡ ಪಶ್ಚಿಮ ಮತಕ್ಷೇತ್ರದಲ್ಲಿ ಶೇ.67.16 ಹಾಗೂ ಹು-ಧಾ ಸೆಂಟ್ರಲ್ ಮತಕ್ಷೇತ್ರದಲ್ಲಿ ಶೇ.66.85 ರಷ್ಟು ಮತದಾನವಾಗಿದೆ.
2019 ರಲ್ಲಿ ನಡೆದ ಚುನಾವಣೆಯಲ್ಲಿ ಶೇ.70.12 ರಷ್ಟು ಮತದಾನವಾಗಿತ್ತು. ಈ ಬಾರಿ ಶೇ.4 ರಷ್ಟು ಹೆಚ್ಚಿನ ಮತದಾನವಾಗಿದೆ.