BREAKING : ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕಾರು ಅಪಘಾತ - ಪ್ರಾಣಾಪಾಯದಿಂದ ಪಾರಾದ ದೀದಿ

ಕೋಲ್ಕತ್ತಾ : ಕೋಲ್ಕತ್ತಾದಲ್ಲಿ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವ್ರ ಕಾರು ಅಪಘಾತಕ್ಕೀಡಾಗಿದ್ದು, ಪ್ರಾಣಪಾಯದಿಂದ ಪಾರಾಗಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.
ಮಮತಾ ಬ್ಯಾನರ್ಜಿ ಅವ್ರ ಕಾರು ಕೋಲ್ಕತ್ತಾದಲ್ಲಿ ಅಪಘಾತಕ್ಕೀಡಾಗಿದ್ದು, ಅವರ ತಲೆ ಸಣ್ಣ ಗಾಯವಾಗಿದೆ ಎನ್ನಲಾಗ್ತಿದ್ದು, ದೊಡ್ಡ ಆಪಾಯದಿಂದ ಪಾರಾಗಿದ್ದಾರೆ.
ಅಂದ್ಹಾಗೆ, ಕೆಲವು ಗಂಟೆಗಳ ಹಿಂದೆಯಷ್ಟೇ ಬಂಗಾಳದಲ್ಲಿ ಕಾಂಗ್ರೆಸ್ನೊಂದಿಗೆ ಯಾವುದೇ ಮೈತ್ರಿ ಇಲ್ಲ ಮತ್ತು ರಾಷ್ಟ್ರೀಯ ಮಟ್ಟದಲ್ಲಿ ಮೈತ್ರಿಯ ಬಗ್ಗೆ ಯಾವುದೇ ನಿರ್ಧಾರವನ್ನ ಚುನಾವಣೆಯ ನಂತರ ತೆಗೆದುಕೊಳ್ಳಲಾಗುವುದು ಎಂದು ಮಮತಾ ಬ್ಯಾನರ್ಜಿ ಸ್ಫೋಟಕ ಘೋಷಣೆ ಮಾಡಿದ್ದರು. ಈ ವೇಳೆ ಕಾಂಗ್ರೆಸ್ ವಿರುದ್ಧ ಹರಿಹಾಯ್ದರು.