Women's Asia Cup: ಶ್ರೀಲಂಕಾ ವಿರುದ್ಧ ಗೆದ್ದು 7ನೇ ಬಾರಿ ಕಪ್ ಎತ್ತಿ ಹಿಡಿದ ಭಾರತ

ಸಿಲ್ಹೆಟ್: 2022ರ ಮಹಿಳಾ ಏಷ್ಯಾ ಕಪ್ ಫೈನಲ್‌ನಲ್ಲಿ ಅದ್ಭುತ ಬೌಲಿಂಗ್ ಹಾಗೂ ಬ್ಯಾಟಿಂಗ್ ಪ್ರದರ್ಶನ ತೋರಿದ ಭಾರತ ಮಹಿಳಾ ತಂಡವು ಶ್ರೀಲಂಕಾ ವಿರುದ್ಧ ಗೆದ್ದು, ಮತ್ತೊಮ್ಮೆ ಚಾಂಪಿಯನ್ ಪಟ್ಟಕ್ಕೆ ಏರಿದೆ.
ಬಾಂಗ್ಲಾದೇಶದ ಸಿಲ್ಹೆಟ್ ಅಂತರರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ 'ಮಹಿಳಾ ಏಷ್ಯಾ ಕಪ್ ಫೈನಲ್'ನಲ್ಲಿ ಹರ್ಮನ್‌ಪ್ರೀತ್ ಕೌರ್ ನಾಯಕತ್ವದ ಭಾರತ ಮಹಿಳಾ ಕ್ರಿಕೆಟ್ ತಂಡವು ಶ್ರೀಲಂಕಾಗೆ ಆಘಾತ ನೀಡಿದೆ. 8 ವಿಕೆಟ್‌ಗಳಿಂದ ಭರ್ಜರಿ ಗೆಲುವು ಸಾಧಿಸುವ ಮೂಲಕ ಭಾರತವು ದಾಖಲೆಯ 7ನೇ ಬಾರಿ ಚಾಂಪಿಯನ್ ಆಗಿ ಹೊರ ಹೊಮ್ಮಿದೆ.
ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಶ್ರೀಲಂಕಾ ವನಿತೆಯರ ತಂಡವು ಮೊದಲು ಬ್ಯಾಟಿಂಗ್ ಮಾಡಿ 9 ವಿಕೆಟ್ ನಷ್ಟಕ್ಕೆ ಕೇವಲ 65 ರನ್ ಗಳಿಸಿತ್ತು. ಬಳಿಕ ಬ್ಯಾಟಿಂಗ್ ಮಾಡಿದ ಭಾರತ ವನಿತೆಯರ ತಂಡವು ಕೇವಲ 8.3 ಓವರ್‌ಗಳಲ್ಲಿ 2 ವಿಕೆಟ್ ನಷ್ಟಕ್ಕೆ 71 ರನ್ ಗಳಿಸಿತು.