ಅವಳಿ ನಗರದಲ್ಲಿನ ಕಾಮಗಾರಿಗಳನ್ನು ಶೀಘ್ರದಲ್ಲಿ ಮುಗಿಸಿ : ಅಧಿಕಾರಿಗಳ ಜೊತೆ ಜೋಶಿ ಸಭೆ

ಹುಬ್ಬಳ್ಳಿ : ಹುಬ್ಬಳ್ಳಿ ಧಾರವಾಡ ಅವಳಿ ನಗರದಲ್ಲಿ ನಡೆಯುತ್ತಿರುವ ರಸ್ತೆ ಕಾಮಗಾರಿಗೆ ಸಂಬಂಧಿಸಿದ ಅಧಿಕಾರಿಗಳ ಜೊತೆ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅವರು ಸಭೆ ಮಾಡಿದರು.
ಹುಬ್ಬಳ್ಳಿ ಧಾರವಾಡ ನಗರದಲ್ಲಿ ಸಾಕಷ್ಟು ಕಾಮಗಾರಿಗಳು ಆಮೇಗತಿಯಲ್ಲಿ ನಡೆಯುತ್ತಿವೆ. ಇದನ್ನೆಲ್ಲ ಗಮನಿಸಿದ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅವರು ಸಂಬಂಧಿಸಿದ ಅಧಿಕಾರಿಗಳನ್ನು ಜೊತೆ ಸಭೆ ಮಾಡಿದರು.
ಹುಬ್ಬಳ್ಳಿ ನಗರದಲ್ಲಿ ನಿರ್ಮಾಣ ಹಂತದಲ್ಲಿರುವ ಫ್ಲೈಓವರ್ ಕಾಮಗಾರಿ ಮತ್ತು ಹುಬ್ಬಳ್ಳಿ ಧಾರವಾಡ ಬೈಪಾಸ್ ರಸ್ತೆ ಕಾಮಗಾರಿಯನ್ನು ಯಾವುದೇ ಕಾರಣಕ್ಕೂ ನಿಧಾನಗತಿಯಲ್ಲಿ ನಡೆಸದಂತೆ ಸೂಚಿಸಿದರು. ಅಷ್ಟೇ ಅಲ್ಲದೆ ಶೀಘ್ರದಲ್ಲೇ ಸಾರ್ವಜನಿಕರ ಬಳಕೆಗೆ ಮುಕ್ತಗೊಳಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಇದೇ ಸಮಯದಲ್ಲಿ ಬೀದಿ ದೀಪ, ಹೆಸ್ಕಾಂಗೆ ಸಂಬಂಧಿಸಿದ ಸಮಸ್ಯೆಗಳನ್ನು ಕೂಡ ಬಗೆಹರಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ಈ ಸಭೆಯಲ್ಲಿ ಶಾಸಕ ಅರವಿಂದ ಬೆಲ್ಲದ ಜಿಲ್ಲಾಧಿಕಾರಿ ದಿವ್ಯಪ್ರಭು ಹಾಗೂ ಹಲವಾರು ಅಧಿಕಾರಿಗಳು ಉಪಸ್ಥಿತರಿದ್ದರು.