ಅಪಾಯ ಮಟ್ಟ ತಲುಪಿದ 'ಯಮುನಾ ನದಿ ': ತುರ್ತು ಸಭೆ ಕರೆದ ದೆಹಲಿ ಸಿಎಂ

ನವದೆಹಲಿ: ಭಾರಿ ಮಳೆಯಿಂದಾಗಿ ಯಮುನಾ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿದೆ. ಈ ಹಿನ್ನೆಲೆಯಲ್ಲಿ ಪರಿಸ್ಥಿತಿಯನ್ನು ಅವಲೋಕಿಸಲು ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ತುರ್ತು ಸಭೆ ಕರೆದಿದ್ದಾರೆ. ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ದೆಹಲಿ ಪೊಲೀಸ್, ಸೆಕ್ಷನ್ 144 ಜಾರಿಗೊಳಿಸಿದೆ.
ಯಮುನಾ ನದಿಯ ನೀರಿನ ಮಟ್ಟ ಸಾರ್ವಕಾಲಿಕ ದಾಖಲೆ ಮಟ್ಟವನ್ನು 207.55 ಮೀಟರ್ ತಲುಪಿದೆ. ಈ ಮೂಲಕ 45 ವರ್ಷಗಳ ಹಿಂದಿನ ದಾಖಲೆಯನ್ನು ಮುರಿದಿದೆ. 1978ರಲ್ಲಿ ನೀರಿನ ಮಟ್ಟ 207.49 ಮೀಟರ್ ತಲುಪಿತ್ತು ಎಂದು ಕೇಂದ್ರ ಜಲ ಆಯೋಗ (ಸಿಡಬ್ಲ್ಯುಸಿ) ಹೇಳಿದೆ.
ಪ್ರವಾಹ ಸೇರಿದಂತೆ ಯಾವುದೇ ಪರಿಸ್ಥಿತಿಯನ್ನು ಎದುರಿಸಲು ಸನ್ನದ್ಧರಾಗಿದ್ದೇವೆ ಎಂದು ಲೋಕೋಪಯೋಗಿ ಸಚಿವೆ ಅತಿಶಿ ತಿಳಿಸಿದ್ದಾರೆ.