ಗುಲಾಬ್ ಚಂಡಮಾರುತ ಎಫೆಕ್ಟ್: ಕರಾವಳಿ ಭಾಗದಲ್ಲಿ ಯೆಲ್ಲೋ ಅಲರ್ಟ್ ಘೋಷಣೆ

ಗುಲಾಬ್ ಚಂಡಮಾರುತ ಎಫೆಕ್ಟ್: ಕರಾವಳಿ ಭಾಗದಲ್ಲಿ ಯೆಲ್ಲೋ ಅಲರ್ಟ್ ಘೋಷಣೆ

ಬೆಂಗಳೂರು: ಭಾರತದ ಪೂರ್ವ ಕವರಾವಳಿಯಲ್ಲಿ ಗುಲಾಬ್ ಚಂಡಮಾರುತ ರೌದ್ರ ನರ್ತನ ತೋರುತ್ತಿದೆ. ಪರಿಣಾಮ ರಾಜ್ಯದ ಕರಾವಳಿ ಭಾಗದ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಚಿಸಲಾಗಿದೆ. 

 

ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೆಂಗಳೂರು ಸೇರಿ ಕೆಲ ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗುತ್ತಿದ್ದು, ಬಾಗಲಕೋಟೆ, ಬೆಳಗಾವಿ, ಬೀದರ್, ಗದಗ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿಯಲ್ಲಿ ಅಧಿಕ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. 

 

ಬೆಂಗಳೂರಿನಲ್ಲಿ ನಿನ್ನೆ ರಾತ್ರಿ ಹಲವೆಡೆ ಮಳೆಯಾಗಿದ್ದು, ಇಂದು ಕೂಡ ಮೋಡಕವಿದ ವಾತಾವರಣವಿದೆ. ಹಾಗೆ 27 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಅದಲ್ಲದೆ ಮುಂದಿನ 24 ಗಂಟೆಗಳಲ್ಲಿ, ಕರಾವಳಿಯ ಒಡಿಶಾ ಮತ್ತು ಕರಾವಳಿ ಆಂಧ್ರಪ್ರದೇಶದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.