ಆಸ್ಕರ್ ಫರ್ನಾಂಡಿಸ್ ಪಾರ್ಥಿವ ಶರೀರ : ಕಾಂಗ್ರೆಸ್ ನಾಯಕರಿಂದ ಅಂತಿಮ ನಮನ

ಆಸ್ಕರ್ ಫರ್ನಾಂಡಿಸ್ ಪಾರ್ಥಿವ ಶರೀರ : ಕಾಂಗ್ರೆಸ್ ನಾಯಕರಿಂದ ಅಂತಿಮ ನಮನ

ಬೆಂಗಳೂರು: ರಾಜ್ಯ ಕಾಂಗ್ರೆಸ್ ನಾಯಕರು ಇಂದು ಕಾಂಗ್ರೆಸ್ ನಾಯಕ, ರಾಜ್ಯ ಸಭೆ ಸದಸ್ಯ, ಮಾಜಿ ಕೇಂದ್ರ ಸಚಿವ ಆಸ್ಕರ್ ಫರ್ನಾಂಡಿಸ್ ಅವರ ಪಾರ್ಥೀವ ಶರೀರದ ಅಂತಿಮ ದರ್ಶನವನ್ನು ಪಡೆದರು. 

ಕೆಪಿಸಿಸಿ ಕಚೇರಿಯ ಆವರಣದಲ್ಲಿ ಫರ್ನಾಂಡಿಸ್ ಅವರ ಪಾರ್ಥಿವ ಶರೀರದ ಸಾರ್ವಜನಿಕ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ. 
ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್, ಪಕ್ಷದ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಮತ್ತಿತರರು ಪಾರ್ಥಿವ ಶರೀರಕ್ಕೆ ಅಂತಿಮ ನಮನ ಸಲ್ಲಿಸಿದರು. ಆಸ್ಕರ್ ಅವರ ಪತ್ನಿ ಬ್ಲಾಸಂ ಫರ್ನಾಂಡಿಸ್, ಪುತ್ರ ಓಶಾನ್ ಫರ್ನಾಂಡಿಸ್ ಇದ್ದರು.